ಕನ್ನಡ ವಿಷಯದಲ್ಲಿ ಸಾಧನೆ: ಸನ್ಮಾನ
ರಾಯಚೂರು: ಈಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಬಿಜನಗೇರಾ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿ ಚಂದ್ರಶೇಖರ್ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿ ಅದ್ವಿತೀಯ ಸಾಧನೆ ಮಾಡಿದ್ದಾನೆಂದು ಪ್ರೌಢಶಾಲಾ ಸಹ ಶಿಕ್ಷಕರ ಕನ್ನಡ ಭಾಷಾ ವಿಷಯ ಬೋಧಕರ ವೇದಿಕೆ ತಿಳಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ವೇದಿಕೆ ಅಧ್ಯಕ್ಷ ರಾಜಶೇಖರ್ ದಿನ್ನಿ, ಜಿಲ್ಲೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ ಸಾಧನೆ ಮಾಡಿದ ವಿದ್ಯಾರ್ಥಿ ಚಂದ್ರಶೇಖರ್ ಅವರನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವ ಶೈಕ್ಷಣಿಕ ಸಮಾವೇಶದಲ್ಲಿ ಸನ್ಮಾನಿಸಲಾಗುತ್ತದೆ. ಜತೆಗೆ ಕನ್ನಡದಲ್ಲಿ ಹೆಚ್ಚಿನ ಅಂಕ ಗಳಿಸಿದವರನ್ನೂ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.