ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಾಳೆ ಉಪನ್ಯಾಸ

Lingaraj Badiger
Updated On : 11 May 2013, 11:54 am

ರಾಯಚೂರು: ನಗರದ ವಿ.ಎಸ್.ಕಾಂತನವರ್ ಪ್ರತಿಷ್ಠಾನದಿಂದ ನಿರಂತರ ಉಪನ್ಯಾಸ ಮಾಲಿಕೆ ಮೇ 2013 ಕಾರ್ಯಕ್ರಮ ಮೇ 12 ರಂದು ಆಯೋಜಿಸಲಾಗಿದೆ.ನಗರದ ಕಾಂತನವರ್ ಸಭಾಭವನದಲ್ಲಿ ಅಂದು ಬೆಳಗ್ಗೆ 11ಕ್ಕೆ ದ್ರಾವಿಡ ಭಾಷೆಗಳ ಆಳ-ಹರಿವು ಎಂಬ ವಿಷಯದ ಕುರಿತು ಎಸ್.ಎಂ. ಶಶಿಧರ್ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸೇವಾ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಪ್ರೊ.ಪಿ. ಮಲ್ಲಣ್ಣ ವಹಿಸಲಿದ್ದಾರೆ. ವಿ.ಎಸ್. ಕಾಂತನವರ್ ಆಶಯ ನುಡಿಯಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಂಘಟಕರು ಕೋರಿದ್ದಾರೆ.
ತನಿಖೆಗೆ ಆಗ್ರಹ: 15ಕ್ಕೆ ದಸಂಸ ಧರಣಿ
ರಾಯಚೂರು: ಇಲ್ಲಿನ ನಿರ್ಮಿತಿ ಕೇಂದ್ರದ ಎಂಜಿನಿಯರ್ ಗುರುರಾಜ್ ಅವರ ಅವ್ಯವಹಾರಗಳ ತನಿಖೆಗೆ ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಮೇ 15ರಂದು ಧರಣಿ ನಡೆಸಲಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಸರ್ಕಾರ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ನಿರ್ಮಿತಿ ಕೇಂದ್ರ ಸ್ಥಾಪಿಸಿದೆ. ಆದರೆ ನಿರ್ಮಿತಿ ಕೇಂದ್ರದ ಎಂಜಿನಿಯರ್ ಗಳು ಅಕ್ರಮದಲ್ಲಿ ಭಾಗಿಯಾಗಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಮೇ 15ರಂದು ಜಿಪಂ ಸಿಇಒ ಕಚೇರಿ ಎದುರು ಸಂಘಟನೆ ಧರಣಿ ನಡೆಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments