ನೀರಿಗಾಗಿ ಪರದಾಟ
ಗುರುಮಠಕಲ್: ಸಮೀಪದ ಚಂಡರಕಿ ಗ್ರಾಮದಲ್ಲಿ ಕುಡಿವ ನೀರಿಗಾಗಿ ಪರದಾಡುವಂತಾಗಿದೆ. ಗ್ರಾಮದ ಹರಿಜನವಾಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನೀರಿನ ತತ್ವಾರ ಎದುರಾಗಿದ್ದು, ಮಹಿಳೆಯರು ನೀರಿಗಾಗಿ ಆಗ್ರಹಿಸಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ದೂರದ ನಡಿಗೆ: ಗ್ರಾಮದ ಮಹಿಳೆಯರು ಕುಡಿವ ನೀರಿಗಾಗಿ ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಬಾವಿ ಮತ್ತು ಹೊಲಗಳಲ್ಲಿ ಹಾಕಿದ ಬೋರ್ವೆಲ್ ನೀರನ್ನು ಅವಲಂಬಿಸುವಂತಾಗಿದೆ. ಆದ್ದರಿಂದ ಸುಮಾರು 2 ಕಿಮೀ ನಡೆದು ಕೊಡ ನೀರು ತರಲು ಗಂಟೆ ಕಾಲ ವ್ಯಯಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರಿಗೆ ಈಗ ನೀರು ತರುವುದೇ ನಿತ್ಯದ ಕಾಯಕವಾಗಿದೆ. ಆದರೆ ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಪರಿಸ್ಥಿತಿ ಅಷ್ಟೇನೂ ಗಂಭೀರವಾಗಿಲ್ಲ ಎಂಬ ಉಡಾಫೆ ಉತ್ತರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಇದರಿಂದ ಬೇಸತ್ತ ಗ್ರಾಮಸ್ಥರು ಮಹಿಳೆಯರೊಂದಿಗೆ ಚಂಡರಕಿ ಗ್ರಾಪಂಗೆ ಮುತ್ತಿಗೆ ಹಾಕಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ವ್ಯಕ್ತಪಡಿಸಿದ ಘಟನೆ ಜರುಗಿದೆ.
ಬೋರ್ವೆಲ್ ಸದಾ ದುರಸ್ತಿ: ಸರ್ಕಾರವು ಗ್ರಾಮಾಂತರ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗದಂತೆ ಅನುದಾನದ ಹೊಳೆಯನ್ನೇ ಹರಿಸುತ್ತಿದೆ. ಆದರೆ ಇಲ್ಲಿ ಪ್ರತಿವರ್ಷ ಇದೇ ಸಮಸ್ಯೆ ಎದುರಾಗುತ್ತಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.