ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಮತಕ್ಷೇತ್ರದಲ್ಲಿ ಕೆಜೆಪಿಗೆ ಒಲವಿದೆ'

Vishwanath S
Updated On : 12 May 2013, 11:43 am

ಯಾದಗಿರಿ: ನೂತನವಾಗಿ ಅಸ್ತಿತ್ವಕ್ಕೆ ಬಂದ ಕೆಜೆಪಿಗೆ ಈ ಬಾರಿ ಮತದಾರರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಗೆಲ್ಲಲು ಸಾಧ್ಯವಾಗದಿದ್ದರೂ ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಕ್ಷೇತ್ರದ ಪರಾಜಿತ ಕೆಜೆಪಿ ಅಭ್ಯರ್ಥಿ ಡಾ. ವೀರಬಸವಂತರಡ್ಡಿ ಮುದ್ನಾಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಬಾರಿ ಯಾದಗಿರಿ ಮತಕ್ಷೇತ್ರದ ಮತದಾರರು ಕೆಜೆಪಿಗೆ ಉತ್ತಮ ಬೆಂಬಲ ನೀಡಿದ್ದಾರೆ. ಚುನಾವಣೆಯ ಫಲಿತಾಂಶ ಗಮನಿಸಿದಾಗ ಕ್ಷೇತ್ರದಲ್ಲಿ ಪಕ್ಷ 2ನೇ ಸ್ಥಾನದಲ್ಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement