ಪಿಯುಸಿ ಫೇಲ್: ವಿದ್ಯಾರ್ಥಿ ಆತ್ಮಹತ್ಯೆ
ರಾಯಚೂರು: ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ವಿದ್ಯಾರ್ಥಿಯೊಬ್ಬ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾನೆ. ಮೃತನನ್ನು ನಿಂಗಪ್ಪ ಎಂದು ಗುರುತಿಸಲಾಗಿದೆ. ಈತ ಪಿಯುಸಿ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮೇ 7ರಂದು ಮನೆಯಲ್ಲಿರಿಸಿದ್ದ ಕ್ರಿಮಿನಾಶಕ ಸೇವಿಸಿದ್ದ.ಚಿಕಿತ್ಸೆಗೆ ಈತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಈತ ಸೋಮವಾರ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.