ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಮ್ಮೇಳನಾಧ್ಯಕ್ಷ; ನಿಜಾಮಕಾರ ಆಯ್ಕೆಗೆ ಸಲಹೆ

Lingaraj Badiger
Updated On : 15 May 2013, 12:12 pm

ಕ.ಪ್ರ. ವಾರ್ತೆ, ರಾಯಚೂರು, ಮೇ 14
ರಾಯಚೂರು ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ಎರಡನೇ ವಾರದಲ್ಲಿ ಆಯೋಜಿಸಿದ್ದು, ಸಮ್ಮೇಳನಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿನ ಹಿರಿತನ, ಸಾಹಿತ್ಯ ಕೃಷಿ, ಸಾಹಿತ್ಯಿಕ ಚಟುವಟಿಕೆಗಳಲ್ಲಿನ ತೊಡಗಿರುವ ಭಗತ್ ರಾಜ್ ನಿಜಾಮಕಾರ ಅವರನ್ನು ಆಯ್ಕೆ ಮಾಡುವಂತೆ ಸಾಹಿತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಹಿರಿಯ ಸಾಹಿತಿ ಜಂಬಣ್ಣ ಅಮರಚಿಂತ, ಪಂಪಯ್ಯ ಶೆಟ್ಟಿ, ಎಂ.ಬಿ. ಪಾಟೀಲ್, ಭೀಮನಗೌಡ ಇಟಗಿ, ವೀರಹನುಮಾನ್, ಕರಿಯಪ್ಪ ಮಾಸ್ತರ್, ಎಚ್.ಎಚ್. ಮ್ಯಾದಾರ್ ಮತ್ತಿತರರು, ಜಿಲ್ಲೆಯ ಸಾಹಿತ್ಯ ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ತೊಡಗಿರುವ ಭಗತರಾಜ್ ನಿಜಾಮಕಾರ ಅವರು ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಯಾಗಿದ್ದಾರೆಂದು ಸಲಹೆ ನೀಡಿದ್ದಾರೆ.
ಕಾರ್ಯಕಾರಿ ಮಂಡಳಿ ಸಭೆ: ಕಸಾಪ ಜಿಲ್ಲಾಧ್ಯಕ್ಷ ಮಹಾಂತೇಶ್ ಮಸ್ಕಿ ಅವರು ಸಮ್ಮೇಳನಾಧ್ಯಕ್ಷರನ್ನು ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದು, ನಿಜಾಮಕಾರ ಅವರು, ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿದವರಾಗಿದ್ದಾರೆಂದು ತಿಳಿಸಿದ್ದಾರೆ.
1971- 72ರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿ ಪ್ರತಿನಿಧಿಯಾಗಿ ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ತೊಡಗಿದ್ದರು.   ನಗರದ ವಿವಿಧ ಸಾಹಿತ್ಯಿಕ ಚಟುವಚಿಕೆಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುವ ಮೂಲಕ ಭಗತರಾಜ್ ನಿಜಾಮಕಾರ ಹೆಸರು ಪಡೆದಿದ್ದಾರೆಂದು ತಿಳಿಸಿದ್ದಾರೆ.
ಸಾಹಿತ್ಯ ಕೃಷಿಯಲ್ಲಿ ಸಕ್ರೀಯರು: ಹೈ.ಕ. ಪ್ರದೇಶದಲ್ಲಿ ಬಂಡಾಯ ಸಾಹಿತ್ಯ ಹಾಗೂ ಸಂಘಟನೆಯಲ್ಲಿ ಪ್ರಮುಖರಾಗಿ ದುಡಿದಿದ್ದಾರೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸಿರುವ ನಿಜಾಮಕಾರ ಅವರು ಜಿಲ್ಲೆಯಲ್ಲಿ ಇದುವರೆಗೆ ನಡೆದ ಬಹುತೇಕ ಎಲ್ಲ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ಸಿಗೆ ದುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಗತರಾಜ್ ನಿಜಾಮಕಾರ ಅವರಿಗೆ ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ಒತ್ತಾಯ
ರಾಯಚೂರು: ರಾಯಚೂರು ತಾಲೂಕಿನ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸ್ವಾಗತಿಸಿರುವ ದಲಿತ ಸಾಹಿತ್ಯ ಪರಿಷತ್ತು, ಸಮ್ಮೇಳನಾಧ್ಯಕ್ಷರ ಆಯ್ಕೆ ವೇಳೆ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಸಾಹಿತ್ಯ ಕೃಷಿ ಕೈಗೊಂಡವರನ್ನು ಪರಿಗಣಿಸುವಂತೆ ಆಗ್ರಹಿಸಿದೆ.
ಈ ಕುರಿತು ಪ್ರಕಟಣೆ ನೀಡಿ, ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ತಾಯರಾಜ್ ಮರ್ಚಟ್ಹಾಳ್, ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಹಾಗೂ ರಾಯಚೂರು ತಾಲೂಕಿನವರನ್ನೇ ಸಮ್ಮೇಳನಾಧ್ಯರನ್ನಾಗಿ ಆರಿಸಬೇಕು. ಹೊರಗಿನವರನ್ನು ಈ ಸ್ಥಾನಕ್ಕೆ ನೇಮಿಸದಂತೆ ಎಚ್ಚರಿಸಿದ್ದಾರೆ.
ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದವರು ಹಾಗೂ ಹೊರ ತಾಲೂಕುಗಳವರನ್ನು ಆಯ್ಕೆ ಮಾಡಿದಲ್ಲಿ ದಲಿತ ಸಾಹಿತ್ಯ ಪರಿಷತ್ತು ಉಗ್ರವಾಗಿ ಖಂಡಿಸಲಿದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement