ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಗಸ್ಗೂರು: ರಾಯಚೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2013- 14ನೇ ಸಾಲಿನ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಗಳಲ್ಲಿ ನಿಗದಿತ ಚಲನ್ಗಳ ಮೂಲಕ ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗೆ 100 ಹಾಗೂ ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 50 ಪಾವತಿಸಿ ಅರ್ಜಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೇ 25ರೊಳಗೆ ಎಲ್ಲ ಮೂಲ ದಾಖಲೆಗಳು ಮತ್ತು 2 ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್ ರಾಯಚೂರಿನಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ ಮೇ 29. ಮೆರಿಟ್ ಪಟ್ಟಿ ತಿದ್ದುಪಡಿ ಮೇ 31. ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ ಜೂ. 1ರಂದು ಸರ್ಕಾರಿ ಪಾಲಿಟೆಕ್ನಿಕ್ ರಾಯಚೂರಿನಲ್ಲಿ ಪ್ರಕಟಿಸಲಾಗುವುದು. ಜೂ. 3ರಿಂದ ಜೂ.16 ರವರೆಗೆ ಕೌನ್ಸೆಲಿಂಗ್ ಮೂಲಕ ಸೀಟು ಆಯ್ಕೆ ಮಾಡಿಕೊಳ್ಳಬಹುದು. ವಿವರಕ್ಕೆ ಪ್ರಾಚಾರ್ಯರು ಸರ್ಕಾರಿ ಪಾಲಿಟೆಕ್ನಿಕ್ ಲಿಂಗಸ್ಗೂರು ಅವರನ್ನು ಸಂಪರ್ಕಿಸಬಹುದು.
ನಾಳೆ ವಿದ್ಯುತ್ ವ್ಯತ್ಯಯ
ಲಿಂಗಸ್ಗೂರು: ಪಟ್ಟಣದ 220 ಸ್ವೀಕರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಮೇ.19 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ವಿದ್ಯುತ್ ಪ್ರಸರಣ ನಿಗಮದ ಸ್ವೀಕರಣಾ ಕೇಂದ್ರದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಪ್ರವೀಣ ಕುಮಾರ ಮನವಿ ಮಾಡಿದ್ದಾರೆ.