ಪಿಪಿಆರ್ ರೋಗ ತಡೆ ಲಸಿಕೆ ಕಾರ್ಯಕ್ರಮ ಆರಂಭ
ರಾಯಚೂರು: ಕುರಿ ಮತ್ತು ಮೇಕೆಗಳಲ್ಲಿ ಕಂಡುಬರುವ ಪಿಪಿಆರ್ ರೋಗದ ನಿಯಂತ್ರಣಕ್ಕಾಗಿ ಉಚಿತ ಲಸಿಕಾ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದ್ದು, ಜೂ. 14ರವರೆಗೆ ಈ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಇಲಾಖೆಯು, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ ರಾಷ್ಟ್ರಾದ್ಯಂತ ಪಿಪಿಆರ್ ರೋಗದ ವಿರುದ್ಧ ಲಸಿಕೆಯನ್ನು ನೀಡಲಾಗುತ್ತಿದ್ದು, ಇದರಂಗವಾಗಿ ಮೇ 15ರಿಂದ ಆರಂಭಗೊಂಡಿರುವ ಲಸಿಕೆ ನೀಡಿಕೆ ಕಾರ್ಯಕ್ರಮವು ಜೂ. 14ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ಜಿಲ್ಲೆಯ ಪ್ರತಿ ಗ್ರಾಮಕ್ಕೆ ಇಲಾಖೆಯ ಸಿಬ್ಬಂದಿ ಲಸಿಕೆ ನೀಡಲು ಆಗಮಿಸಲಿದ್ದು, ಆ ಸಂದರ್ಭದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆದಾರರು ಎಚ್ಚರವಹಿಸಿ ಮುಂಜಾಗ್ರತೆ ಕ್ರಮವಾಗಿ ಕುರಿ ಮತ್ತು ಮೇಕೆಗಳಿಗೆ ಲಸಿಕೆಯನ್ನು ಹಾಕಿಸುವಂತೆ ಮನವಿ ಮಾಡಿದೆ.