ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಉದ್ಯೋಗ ಭದ್ರತೆಗೆ ಆಗ್ರಹಿಸಿ ಮೆರವಣಿಗೆ

Vishwanath S
Updated On : 19 May 2013, 11:54 am

ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಬಿಸಿಯೂಟ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಅಡುಗೆದಾರರನ್ನು ಕಾಯಂಗೊಳಿಸಿ ಕನಿಷ್ಠ ವೇತನ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿ ಮತ್ತು ಸಿಐಟಿಯು 3ನೇ ತಾಲೂಕು ಸಮ್ಮೇಳನದ ಪ್ರಯುಕ್ತ ಬಿಸಿಯೂಟ ನೌಕರರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು.
ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ವೇತನ ನಿಗದಿಗೊಳಿಸದೇ ಸಂಪೂರ್ಣ ನಿಷ್ಕಾಳಜಿ ತಾಳಿವೆ. ಇದರಿಂದ ನೌಕರರು ಆರ್ಥಿಕ ತೊಂದರೆಯಲ್ಲಿ ಸಿಲುಕಿ ಜೀವನ ನಿರ್ವಹಣೆಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಹಲವಾರು ಬಾರಿ ಧರಣಿ ಸತ್ಯಾಗ್ರಹ, ಹೋರಾಟಗಳ ಮೂಲಕ ಸರ್ಕಾರದ ಗಮನ ಸೆಳೆದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 10 ಸಾವಿರ ಮಾಸಿಕ ವೇತನ, ಪಿಂಚಣಿ ಯೋಜನೆ ಜಾರಿ ಹಾಗೂ ನ್ಯಾಯೋಚಿತವಾಗಿ ದೊರೆಯುವ ಇನ್ನಿತರ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ, ನರಸಿಂಹಪ್ಪ, ರೇಣುಕಮ್ಮ, ವಾಣಿ ಎಸ್. ಖಾದ್ರಿ ಹಾಗೂ ಬಿಸಿಯೂಟ ನೌಕರರು ಮೆರವಣಿಗೆ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement