ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಕರೆ

Vishwanath S
Updated On : 19 May 2013, 11:56 am

ರಾಯಚೂರು: ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿನ ಸಾಧನೆಗೆ ನೀಡಲಾಗುವ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಕರೆಯಲಾಗಿದೆ.
2012-13ನೇ ಸಾಲಿನಲ್ಲಿ ನೀಡುವ ಈ ಪ್ರಶಸ್ತಿಗೆ ಆಸಕ್ತರಿಂದ ನಾಮನಿರ್ದೇಶನ ಆಹ್ವಾನಿಸಿದ್ದು, ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಪಕ ಬಳಕೆ ಈ ವಿಷಯಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹನೀಯರು ನಾಮ ನಿರ್ದೇಶನ ಸಲ್ಲಿಸಬಹುದು.
ಈಗಾಗಲೇ ಪುರಸ್ಕೃತರಾದವರು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮತ್ತು ಅಂಗಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವರು ಅಥವಾ ನಿವೃತ್ತರಾದವರು ಪ್ರಶಸ್ತಿಗೆ ಅರ್ಹರಿರುವುದಿಲ್ಲ. ವಿವರ ಮತ್ತು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲಾ ಕೃಷಿ ನಿರ್ದೇಶಕರು, ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬಹುದಾಗಿದೆ. ಅರ್ಜಿಗಳನ್ನು  ಮೇ 31ರೊಳಗೆ ಜಂಟಿ ಕೃಷಿ ನಿರ್ದೇಶಕರು, ಕೃಷಿ ಆಯುಕ್ತರ ಕಾರ್ಯಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು- ಇವರಿಗೆ ಕಳುಹಿಸಬೇಕು. ನಮೂನೆಗಳು ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್ raita mitra.kar.nic.in ಹಾಗೂ raita mitra.kar.nic.in.kpp.pdf  ನಲ್ಲಿ ಪಡೆಯಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement