ದೇವೇಗೌಡರ ಜನ್ಮದಿನ ಆಚರಣೆ
ರಾಯಚೂರು: ನಗರದ ಕನಕದಾಸ ಅನಾಥ ಮಕ್ಕಳ ಶಾಲೆಯಲ್ಲಿ ಶನಿವಾರ ದೇಶದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಅವರ 81ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್ ಹುಟ್ಟುಹಬ್ಬದ ಅಂಗವಾಗಿ ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಚಾಲನೆ ನೀಡಿದ ನಂತರ ಮಾತನಾಡಿ, 81ರ ಇಳಿ ವಯಸ್ಸಿನಲ್ಲಿಯೂ ದೇವೇಗೌಡರು ರಾಜಕೀಯದಲ್ಲಿ ಸಕ್ರಿಯವಾಗಿರುವುದು ಇಂದಿನ ಯುವಕರಿಗೆ ಸ್ಫೂರ್ತಿ ಎಂದು ಶ್ಲಾಘಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಹಾಂತೇಶ್ ಪಾಟೀಲ್ ಅತ್ತನೂರು, ಶಿವಶಂಕರ್ ವಕೀಲರು, ಬಿ.ತಿಮ್ಮಾರೆಡ್ಡಿ, ಯುಸೂಫ್ ಖಾನ್, ಕುಂಟ್ನಾಳ ವೆಂಕಟೇಶ್, ಲಕ್ಷ್ಮೀಪತಿ, ದಾನಪ್ಪ ಯಾದವ್, ಮಂಚಾಲ ಭೀಮಣ್ಣ, ಸುಭಾಷ್, ಶಂಶಾಲಂ, ರಾಮಕೃಷ್ಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.