ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಂತ್ರಾಲಯ: ನಾಳೆ ಕಲ್ಯಾಣೋತ್ಸವ

Vishwanath S
Updated On : 19 May 2013, 11:57 am

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠ ಹಾಗೂ ಬೆಂಗಳೂರಿನ ಶ್ರೀ ವಾರಿ ಫೌಂಡೇಷನ್ ವತಿಯಿಂದ ಮೇ 20ರಂದು ಮಂತ್ರಾಲಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲಾಗಿದೆ. ಅಂದು ಸಂಜೆ 6.30ಕ್ಕೆ ಮಂತ್ರಾಲಯದ ಯೋಗೀಂದ್ರ ಸಭಾ ಮಂಟಪದಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಸಾನಿಧ್ಯವನ್ನು ಸುಯತೀಂದ್ರತೀರ್ಥರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಶ್ರೀಮಠ ಮನವಿ ಮಾಡಿದೆ.

ನಾಳೆ ಕಲ್ಯಾಣೋತ್ಸವ
ಸಿಂಧನೂರು: ತಾಲೂಕಿನ ಸುಕ್ಷೇತ್ರ ಒಳಬಳ್ಳಾರಿಯಲ್ಲಿ ಮೇ 20ರಂದು ಲಕ್ಷ್ಮೀ ರಂಗನಾಥಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ ಎಂದು ತಾಲೂಕು ಬ್ರಾಹ್ಮಣ ಅಧ್ಯಕ್ಷ ರಾಮರಾವ್ ಕುಲಕರ್ಣಿ ಹಾಗೂ ಒಳಬಳ್ಳಾರಿ ರಂಗನಾಥ ದೇವಸ್ಥಾನದ ಅರ್ಚಕ ಗುರುರಾಜಾಚಾರ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿದ್ವಾನ ವೇಣುಗೋಪಾಲಾಚಾರ್ಯ ಅಗ್ನಿಹೋತ್ರಿ ಅವರಿಂದ ಮೇ 19ರಂದು ಶ್ರೀನಿವಾಸ ಕಲ್ಯಾಣ ಪ್ರವಚನ ನಡೆಯಲಿದೆ. ಅದಕ್ಕೂ ಪೂರ್ವದಲ್ಲಿ ಅಷ್ಟೋತ್ತರ ಪಾರಾಯಣ, ಪಂಚಾಮೃತ ಅಭಿಷೇಕ, ತೀರ್ಥಪ್ರಸಾದ, ಸಂಜೆ ವಿವಿಧ ವಾದ್ಯಗಳೊಂದಿಗೆ ಆಂಜನೇಯ ದೇವಸ್ಥಾನದಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ಲಕ್ಷ್ಮೀರಂಗನಾಥಸ್ವಾಮಿ ದೇವಸ್ಥಾನದವರೆಗೆ ಶೋಭಾಯಾತ್ರೆ ನಡೆಯಲಿದೆ. ಮೈಸೂರು ರಾಮಚಂದ್ರಾಚಾರ್ಯ ಅವರಿಂದ ದಾಸವಾಣಿ ನಡೆಯಲಿದೆ. ಮೇ 20ರಂದು ಲಕ್ಷ್ಮೀರಂಗನಾಥಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ. ಉತ್ಸವಮೂರ್ತಿಗಳೊಂದಿಗೆ ವಾದ್ಯ, ಭಜನೆಯೊಂದಿಗೆ ಆಂಜನೇಯ ದೇವಸ್ಥಾನವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಗೃಹಿಣಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಮಹಿಳೆಯೊಬ್ಬಳು ಗಂಡನ ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಶ್ರೀದೇವಿ ಎಂದು ಗುರುತಿಸಲಾಗಿದೆ. ಈಕೆಯನ್ನು ಗ್ರಾಮದ ಅಮರೇಶ್ ಎಂಬಾತನೊಂದಿಗೆ ಮದುವೆ ಮಾಡಲಾಗಿತ್ತು. ಆದರೆ ಕ್ಷುಲ್ಲಕ ಕಾರಣಗಳಿಗೆ ಅಮರೇಶ ತನ್ನ ಪತ್ನಿ ಶ್ರೀದೇವಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಅದರಿಂದ ಬೇಸತ್ತ ಶ್ರೀದೇವಿ, ಕಿರುಕುಳ ತಾಳದೆ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಕೂಡಲೇ ಆಕೆಯನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾಳೆಂದು ಪೊಲೀಸರಿಗೆ ದೂರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement