ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ

Vishwanath S
Updated On : 19 May 2013, 11:56 am

ರಾಯಚೂರು: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ- ಬಾಲಕಿಯರ ವಸತಿ ನಿಲಯಗಳಿಗೆ 2013-14ನೇ ಸಾಲಿಗಾಗಿ ಸೇರ ಬಯಸುವ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಅರ್ಜಿ ಕರೆಯಲಾಗಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿ ಕೊಳ್ಳಲಾಗುವುದು. ವಸತಿ ನಿಲಯಗಳಿಗೆ ಸೇರಬಯಸುವವರು ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಕಳೆದ ವರ್ಷ ಪಾಸಾದ ತಮ್ಮ ವಿದ್ಯಾರ್ಹತೆಯ ಪ್ರಮಾಣ ಪತ್ರ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳಲ್ಲಿ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಭಾವಚಿತ್ರದೊಂದಿಗೆ ಅರ್ಜಿಗಳನ್ನು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, ರಾಯಚೂರು ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement