ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಆಸರೆ ವಿವಿಧೋದ್ದೇಶ ಸಹಕಾರಿಯ ವಾರ್ಷಿಕೋತ್ಸವ

Rashmi Kasaragodu
Updated On : 20 May 2013, 11:30 am

ಸಿಂಧನೂರು: ನಗರದ ಆಸರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವ ಮೇ 20ರಂದು ಸೋಮವಾರ ತಾಲೂಕು ಪಂಚಾಯಿತಿ ಕಚೇರಿ ಎದುರಿಗೆ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯ ಮತ್ತು ಉದ್ಘಾಟನೆಯನ್ನು ಮೂರು ಮೈಲ್ ಕ್ಯಾಂಪ್ ರಂಭಾಪುರಿ ಖಾಸಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಸಿಂಧನೂರು ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಬಿ.ರಾಜಶೇಖರ, ಅಧ್ಯಕ್ಷತೆಯನ್ನು ಆಸರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಲಯ್ಯ ಶೇ.ಹಿರೇಮಠ ವಹಿಸಲಿದ್ದಾರೆ.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಚಿದಾನಂದಪ್ಪ ಅಂಗಡಿ, ಶ್ಯಾಮಕುಮಾರ, ಎಸ್.ಶರಣೇಗೌಡ, ಸುನೀಲ್‌ಕುಮಾರ ದೇಸಾಯಿ ಅವರನ್ನು ಸನ್ಮಾನಿಸಲಾಗುವುದೆಂದು ಬ್ಯಾಂಕಿನ ಸಿಇಒ ಮಹಾಂತೇಶ ಹಿರೇಮಠ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement