ಬೈಕ್ಗಳ ಡಿಕ್ಕಿ:ನಾಲ್ವರಿಗೆ ಗಾಯ
ದೇವದುರ್ಗ: ಇಲ್ಲಿನ ಜಹೀರುದ್ದೀನ್ ಪಾಷಾ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಬೈಕ್ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೃಷ್ಣಪ್ಪ, ದೇವಮ್ಮ, ಮಂಜುನಾಥ ಮತ್ತು ಮದರ್ ಸಾಬ್ ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ತೆರಳುತ್ತಿದ್ದು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.