ಅರ್ಜಿ ಆಹ್ವಾನ
ರಾಯಚೂರು: ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರವು 2010ನೇ ಸಾಲಿನ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರವು ಸಗಟು ಖರೀದಿ ಯೋಜನೆಯಡಿ ಖರೀದಿಸಲು ಲೇಖಕರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಉಚಿತವಾಗಿ ಪಡೆದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ ಜೆ.ಸಿ. ರಸ್ತೆ ಬೆಂಗಳೂರು ಇವರಿಗೆ ಜೂ.15ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ದೂರವಾಣಿ ಸಂಖ್ಯೆ- 080-22484516, 22107704 ಇಲ್ಲಿಗೆ ಸಂಪರ್ಕಿಸಲು ಪ್ರಾಧಿಕಾರ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.