ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಸ್ಕಿಹಾಳ ಗ್ರಾಮ: ಬೈಕ್‌ಗೆ ಡಿಕ್ಕಿ, ಬಾಲಕ ಸಾವು

Rashmi Kasaragodu
Updated On : 21 May 2013, 12:14 pm

ರಾಯಚೂರು: ನಗರದ ಹೊರವಲಯದ ಅಸ್ಕಿಹಾಳ ಗ್ರಾಮದ ಬಳಿ ಬೈಕ್‌ಗೆ ಬೊಲೆರೋ ಡಿಕ್ಕಿ ಹೊಡೆದು ಬಾಲಕ ಸಾವಿಗೀಡಾಗಿದ್ದಾನೆ.
ಮೃತನನ್ನು ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದ ಮನೋಜ್ ಕುಮಾರ್ (11) ಎಂದು ಗುರುತಿಸಲಾಗಿದೆ. ಈತ ತನ್ನ ತಂದೆಯೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ರಾಯಚೂರು ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಡಿಕ್ಕಿ: ವ್ಯಕ್ತಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವಿಗೀಡಾಗಿದ್ದಾನೆ. ಮೃತನನ್ನು ರಾಜೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಅಪರಿಚಿತ ವಾಹನವು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಇವರ ತಲೆಗೆ ಭಾರೀ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಟ್ಟಿಂಗ್: ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ಬಸ್‌ನಿಲ್ದಾಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತನನ್ನು ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈತ ಗ್ರಾಮದ ಇನ್ನಿತರರೊಂದಿಗೆ ಹೈದ್ರಾಬಾದಿನಲ್ಲಿ ನಡೆದ ಐಪಿಎಲ್ ಪಂದ್ಯಗಳಾದ ಸನ್ ರೈಸರ್ಸ್ ಹೈದ್ರಾಬಾದ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ತಂಡಗಳ ಮಧ್ಯದ ಹಣಾಹಣಿಯ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದರು.
ಈ ಸಂದರ್ಭದಲ್ಲಿ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 1ಸಾವಿರ ಜಪ್ತಿ ಮಾಡಿದ್ದಾರೆ.
ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಜೂಜು: 12  ಬಂಧನ
ರಾಯಚೂರು: ನಗರದ ಸಿಯಾತಲಾಬ್ ಪ್ರದೇಶದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ನಗರಸಭೆ ಸದಸ್ಯ ಸೇರಿದಂತೆ ಒಟ್ಟು 12 ಜನರನ್ನು ಬಂಧಿಸಿದ್ದಾರೆ.
ಬಂಧಿತರನ್ನು ನಗರಸಭೆ ಸದಸ್ಯ ಗೋರಾ ಮಾಸೂಮ್ ಸೇರಿದಂತೆ 12 ಜನರೆಂದು ಗುರುತಿಸಲಾಗಿದೆ. ಇವರು ಸಿಯಾತಲಾಬ್ ಪ್ರದೇಶದ ಮನೆಯೊಂದರಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಡಿವೈಎಸ್ಪಿ ಡಾ.ದಿವ್ಯಾ ಗೋಪಿನಾಥನ್ ಅವರು ಆರೋಪಿಗಳನ್ನು ಬಂಧಿಸಿ ಅವರಿಂದ 6 ಲಕ್ಷ ಜಪ್ತಿ ಮಾಡಿದ್ದಾರೆ.
ಈ ಕುರಿತು ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement