ತೀರ್ಮಾನಕ್ಕೆ ಬದ್ಧ
ಸಿಂಧನೂರು: ಕಾಂಗ್ರೆಸ್ ಹೈಕಮಾಂಡ್ ಸಾಮಾಜಿಕ ನ್ಯಾಯದಡಿ ಮಂತ್ರಿಗಳನ್ನು ಆಯ್ಕೆ ಮಾಡಿದೆ. ತಾವು ಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೆ. ಕಾಂಗ್ರೆಸ್ ಮುಖಂಡರ ಮೇಲೆ ಒತ್ತಡ ಹಾಕಲಾಗಿತ್ತು. ಆದರೆ ಹೈಕಮಾಂಡ್ ಜಿಲ್ಲೆಗೆ ಆದ್ಯತೆ ನೀಡಿಲ್ಲ. ಆದರೆ ಹೈಕಮಾಂಡ್ ತೀರ್ಮಾನಕ್ಕೆ ತಾವು ಬದ್ಧ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಅವರು 'ಕನ್ನಡಪ್ರಭ'ದೊಂದಿಗೆ ಮಾತನಾಡಿ, 10 ಜಿಲ್ಲೆಗಳಲ್ಲಿ ಸಚಿವರನ್ನು ಮಾಡಿಲ್ಲ. ಇನ್ನೂ 5 ಸ್ಥಾನಗಳು ಬಾಕಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಒಕ್ಕೊರಲಿನಿಂದ ಮನವಿ ಸಲ್ಲಿಸಲಾಗಿದೆ ಎಂದರು.