ಲೋಕಾಯುಕ್ತರ ಪ್ರವಾಸ ಇಂದಿನಿಂದ
ರಾಯಚೂರು: ಜಿಲ್ಲಾ ಲೋಕಾಯುಕ್ತ ಆಧಿಕಾರಿಗಳು ಮೇ 21ರಿಂದ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರ ಕುಂದುಕೊರತೆಯ ಅಹವಾಲು ಸ್ವೀಕರಿಸಲಿದ್ದಾರೆ.
ಮೇ 21ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಸಿಂಧನೂರು ನಗರದ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಅದೇ ರೀತಿ ಮೇ 22ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಲಿಂಗಸ್ಗೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ದೂರು ಸ್ವೀಕರಿಸಿ ಅಹವಾಲುಗಳನ್ನು ಆಲಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ನೀಡಿ ದಾಖಲಿಸಬಹುದು. ಸ್ಥಳದಲ್ಲಿಯೇ ಪತ್ರಗಳನ್ನು ನೀಡಲಾಗುವುದು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ ತಿಳಿಸಿದೆ.