ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಸತಿ ನಿಲಯ: ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆಹ್ವಾನ

Rashmi Kasaragodu
Updated On : 21 May 2013, 12:14 pm

ರಾಯಚೂರು: ದೇವದುರ್ಗ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ದೇವದುರ್ಗ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2013-14ನೇ ಸಾಲಿಗೆ ಖಾಲಿ ಇರುವ ಸ್ಥಾನಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಸರ್ಕಾರಿ ವಿದ್ಯಾರ್ಥಿ ನಿಲಯಗಳಾದ ಮೆಟ್ರಿಕ್ ಪೂರ್ವ ಬಾಲಕರ- ಬಾಲಕಿಯರ ವಿದ್ಯಾರ್ಥಿ ನಿಲಯ ದೇವದುರ್ಗ ಪಟ್ಟಣ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಜಾಲಹಳ್ಳಿ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕೊಪ್ಪರ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಅರಕೇರಾ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾಥಿ ನಿಲಯ ಗಬ್ಬೂರು, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಗಲಗ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನೀಲಗಲ್,
5 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2-ಎ, 2-ಬಿ, 3-ಎ, 3-ಬಿ, ಪರಿಶಿಷ್ಠ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಿದ್ಯಾರ್ಥಿ ನಿಲಯದಿಂದ 5 ಕಿ.ಮೀ. ಒಳಗೆ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಪ್ರವೇಶಾತಿ ಸೌಲಭ್ಯ ಕಲ್ಪಿಸಲಾಗುವುದು. ವಿದ್ಯಾಥಿ ನಿಲಯದಲ್ಲಿ ಉಚಿತ ವಸತಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುವುದು. ಇಚ್ಛೆಯುಳ್ಳ ವಿದ್ಯಾರ್ಥಿಗಳು ಅರ್ಜಿಯನ್ನು ದೇವದುರ್ಗ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಹಾಗೂ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಂದ ಉಚಿತವಾಗಿ ಪಡೆದು ಅರ್ಜಿಯೊಂದಿಗೆ ಧೃಡೀಕೃತ ಹಿಂದಿನ ಸಾಲಿನಲ್ಲಿ ತೇರ್ಗಡೆಯಾದ ಅಂಕಪಟ್ಟಿ, ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ತಹಸೀಲ್ದಾರರಿಂದ ಪಡೆದ ಜಾತಿ ಆದಾಯ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಜೂ.5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement