ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕುಡಿವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ'

Rashmi Kasaragodu
Updated On : 22 May 2013, 11:21 am

ಸಿಂಧನೂರು: ಮಸ್ಕಿ ಕ್ಷೇತ್ರದಲ್ಲಿ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಮುಂಗಾರು ಮಳೆ ಇನ್ನು ನಮ್ಮ ಭಾಗದಲ್ಲಿ ಬಾರದ ಕಾರಣ, ಕೆಲಮೊಂದು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವದೆಂದು ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ 24ರಂದು ಸಿಂಧನೂರು ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಮತ್ತು ಅಧ್ಯಕ್ಷರುಗಳನ್ನೊಳಗೊಂಡ ಸಭೆಯನ್ನು ಕರೆದು ಕುಡಿಯುವ ನೀರಿನ ಸಮಸ್ಯೆ ಜೊತೆಯಲ್ಲಿ ಬೇರೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವದು ಎಂದರು.
ಈ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಮರೇಶ ತಿಡಿಗೋಳ, ಯುವ ಮುಖಂಡ ಶರಣೇಗೌಡ ಹೊಸಗೌಡ ಕಲಮಂಗಿ, ಶರಣಪ್ಪ ನಾಯಕ ಉಮಲೂಟಿ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement