ಮೊರಾರ್ಜಿ ವಸತಿ ಶಾಲೆ: ಅರ್ಜಿ ಆಹ್ವಾನ
ರಾಯಚೂರು: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ವಿವಿಧ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 10 ನೇ ತರಗತಿಯ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗಕ್ಕೆ ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ಸಹಿತ ಸೌಲಭ್ಯ ಕಲ್ಪಿಸಲಾಗಿದೆ. ಆಯಾ ತಾಲೂಕಿನ ಸಮಾಜ ಕಲ್ಯಾಣ ಕಾರ್ಯಾಲಯಗಳಲ್ಲಿ ಪಡೆದು ಮೇ 23ರೊಳಗೆ ಕಚೇರಿಗಳಿಗೆ ಸಲ್ಲಿಸಲು ಕೋರಲಾಗಿದೆ