ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಕ್ರಮ ಮದ್ಯ ಜಪ್ತಿ: ಮೂವರ ಸೆರೆ

Rashmi Kasaragodu
Updated On : 23 May 2013, 11:38 am

ರಾಯಚೂರು: ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಾಯಣ್ಣ, ರವಿ ಮತ್ತು ಶಾಂತಕುಮಾರ ಎಂದು ಗುರುತಿಸಲಾಗಿದೆ. ಇವರು ಗ್ರಾಮದಲ್ಲಿ ಲೈಸೆನ್ಸ್ ಇಲ್ಲದೇ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ಒಟ್ಟು  ರು. 5528 ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಈ ಕುರಿತು ಯಾಪಲದಿನ್ನಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹೆಂಡ ಮಾರಾಟ: ವ್ಯಕ್ತಿ ಬಂಧನ
ರಾಯಚೂರು: ತಾಲೂಕಿನ ಮಾಮಡದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಹೆಂಡ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವೆಂಕಟೇಶ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಹೆಂಡ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವರಿಂದ 25ಲೀಟರ್ ಹೆಂಡ ಜಪ್ತಿ ಮಾಡಿದ್ದಾರೆ. ಈ ಕುರಿತು ಯಾಪಲದಿನ್ನಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಟ್ಕಾ; ಒಬ್ಬನ ಬಂಧನ: ಸಿಂಧನೂರು ತಾಲೂಕಿನ ದುರ್ಗಾಕ್ಯಾಂಪಿನಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸೋಮಣ್ಣ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 1500 ಜಪ್ತಿ ಮಾಡಿದ್ದಾರೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕಾರು ಅಪಘಾತ: ಮಾನ್ವಿ ಪಾದ್ರಿ ಸಾವು
ದಾವಣಗೆರೆ: ಮುಂದೆ ಬರುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣವನ್ನು ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದ್ದರಿಂದ ಕ್ರೈಸ್ತ ಪಾದ್ರಿಯೊಬ್ಬರು ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಹರಿಹರ ತಾ. ಭಾಸ್ಕರರಾವ್ ಕ್ಯಾಂಪ್ ಬಳಿ ಸಂಭವಿಸಿದೆ. ರಾಯಚೂರು ಜಿಲ್ಲೆ ಮಾನ್ವಿ ತಾ. ಕವಿತಾಳ ಗ್ರಾಮದ ಪಾದ್ರಿ ಫಾದರ್ ಜೋಸೆಫ್ ಮೃತ ದುರ್ಧೈವಿ. ಕವಿತಾಳ್‌ನ ಸಿಸ್ಟರ್ ಕಾಂತಿ ಹಾಗೂ ಕಾರು ಚಾಲಕ ಪ್ರೇಮ್ ಗಾಯಗೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 ಶಿವಮೊಗ್ಗ ಜಿಲ್ಲೆ ಹೊಸನಗರದಿಂದ ಮಾನ್ವಿ ತಾಲೂಕು ಕವಿತಾಳ್‌ಗೆ ಕಾರಿನಲ್ಲಿ ವಾಪಾಸ್ಸಾಗುವಾಗ ಭಾಸ್ಕರರಾವ್ ಕ್ಯಾಂಪ್ ಬಳಿ ಈ ದುರಂಅರಪ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಚಾಲಕ ಪ್ರೇಮ್‌ನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಮುಂಭಾಗದಲ್ಲಿದ್ದ  ಫಾದರ್ ಜೋಸೆಫ್ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಸಿಲ್ವಾ ನೀಡಿದ ದೂರಿನ ಮೇರೆಗೆ ಮಲೆಬೆನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement