ತಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡನೆ
ರಾಯಚೂರು: ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಕಾರ್ಯವೈಖರಿ ವಿರೋಧಿಸಿ ತಾಪಂ.ನ 11 ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿ ಮಂಗಳವಾರ ಸಹಾಯಕ ಆಯುಕ್ತರಿಗೆ ಅರ್ಜಿ ಸಲ್ಲಿಸಿದರು. ನಗರದ ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿದ 11 ಕಾಂಗ್ರೆಸ್ ಸದಸ್ಯರು ಅಧ್ಯಕ್ಷೆ ಅನಂತಮ್ಮ ಹಾಗೂ ಉಪಾಧ್ಯಕ್ಷೆ ಮಂಜುಳಾ ಪ್ಯಾಟಿ ಅವರು ಸರ್ವಾಧಿಕಾರಿ ಧೋರಣೆ ನಡೆಸಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿ ಅವಿಶ್ವಾಸ್ಙ ಸಭೆ ಕರೆಯುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.ತಾಪಂ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಅವಿಶ್ವಾಸ ಸಭೆ ಕರೆಯುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಹಾಯಕ ಆಯುಕ್ತರು ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡುವುದಾಗಿ ಭರವಸೆ ನೀಡಿದರು.
ತಾಪಂ ಸದಸ್ಯರಾದ ಚಂದ್ರಶೇಖರ್ ರೆಡ್ಡಿ, ಜಯಮ್ಮ, ಶಿವಶರಣಗೌಡ, ರಾಮುಲು, ಚಾಂದ್ ಪಾಷಾ, ತಿಮ್ಮಪ್ಪ, ಹುಸೇನಮ್ಮ, ಶ್ರೀನಿವಾಸ ನಾಯಕ, ಲಿಂಗಮ್ಮ, ಶಶಿಧರ್, ಕರುಣಾ ಅವಿಶ್ವಾಸ ವ್ಯಕ್ತಪಡಿಸಿದ್ದಾರೆ.