ನಿರ್ಲಕ್ಷ್ಯಕ್ಕೆ ಡಿಸಿ ನೊಟೀಸ್ ಜಾರಿ
ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ನಿರ್ಲಕ್ಷ್ಯ ತೋರಿರುವ ತಾಲೂಕು ಮಟ್ಟದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಮುಂದಾಗಿರುವ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ್ ಅವರು ನಿರ್ಲಕ್ಷ್ಯಕ್ಕೆ ಶಿಸ್ತುಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.
ಜಿಲ್ಲೆಯ ಎಲ್ಲ ಐದು ತಾಲೂಕುಗಳ ತಹಸೀಲ್ದಾರರು, ತಾಪಂ ಇಒ ಗಳು, ಹಾಗೂ ಜಿಪಂ ಎಇಇ ಅವರಿಗೆ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ್ ಅವರು ನೋಟೀಸ್ ಜಾರಿ ಮಾಡಿದ್ದು, ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ತೋರಿದ ನಿರ್ಲಕ್ಷ್ಯಕ್ಕೆ ಶಿಸ್ತುಕ್ರಮದ ಎಚ್ಚರಿಕೆ ನೀಡಿದ್ದಾರೆ.ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೋಟ್ಯಂತರ ರು. ಒದಗಿಸಿದ್ದರೂ ಅಧಿಕಾರಿಗಳು ಸ್ಥಳೀಯವಾಗಿ ಸಮಸ್ಯೆ ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಆರಂಭಿಸಲು ಅಸಡ್ಡೆ ತೋರಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, 7 ದಿನದಲ್ಲಿ ನೋಟೀಸ್ಗೆ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ಗೊತ್ತಾಗಿದೆ.