ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನ
ರಾಯಚೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2013- 14ನೇ ಸಾಲಿಗೆ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದು, ಅರ್ಜಿಗಳನ್ನು ಉಚಿತವಾಗಿ ಪಡೆದು ಜೂ. 5ರೊಳಗೆ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೋರ್ಟ್ ಎದುರು ಗಡೆ, ರಾಯಚೂರು ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ.