ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

26ರಂದು ಜೆಡಿಎಸ್ನಿಂದ ಕಾರ್ಮಿಕ ದಿನಾಚರಣೆ

Rashmi Kasaragodu
Updated On : 24 May 2013, 11:55 am

ಕ.ಪ್ರ. ವಾರ್ತೆ   ರಾಯಚೂರು   ಮೇ 23
ಜಿಲ್ಲೆಯಲ್ಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸುವ ಉದ್ದೇಶದಿಂದ ಮೇ 26ರಂದು ನಗರದಲ್ಲಿ ಜಾತ್ಯತೀತ ಜನತಾದಳದ ಕಾರ್ಮಿಕ ಘಟಕದಿಂದ ಕಾರ್ಮಿಕ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.
ನಗರದಲ್ಲಿ ಗುರುವಾರ ಜೆಡಿಎಸ್ನಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಎಸ್ ಕಾರ್ಮಿಕ ಘಟಕದ ನಗರಾಧ್ಯಕ್ಷ ಉದಯಕುಮಾರ್ ವಿನ್ನು, ಜೆಡಿಎಸ್ ಕಾರ್ಮಿಕ ಘಟಕವು ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ ನಡೆಸಲಿದೆ. ಈ ನಿಟ್ಟಿನಲ್ಲಿ ಕಾರ್ಮಿಕರನ್ನು ಒಗ್ಗೂಡಿಸುವ ಉದ್ದೇಶದಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿದೆ ಎಂದು ಹೇಳಿದರು.
ಉದ್ಘಾಟನೆ: ಕಾರ್ಮಿಕ ದಿನಾಚರಣೆ ಸಮಾರಂಭವನ್ನು ಪಕ್ಷದ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಶ್ರೀರಾಮಯ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಮಹಾಂತೇಶ್ ಪಾಟೀಲ್ ಅತ್ತನೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಯತ್ನಾಳ್, ಮಾಜಿ ಸಚಿವ ಎಂ.ಎಸ್.ಪಾಟೀಲ್, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಶೇಖ್ ರಿಜ್ವಾನ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಮಾನಪ್ಪ ವಜ್ಜಲ್, ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ಖೂಬಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಕಾರ್ಮಿಕ ಘಟಕ: ಪಕ್ಷದ ಕಾರ್ಮಿಕ ಘಟಕದಿಂದ ಈ ಹಿಂದೆಯೇ ಸಮಾರಂಭ ಆಯೋಜಿಸಲು ಉದ್ದೇಶಿಸಲಾಗಿತ್ತು. ಆದರೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆ ಸಮಾರಂಭ ಸದ್ಯ ಆಯೋಜಿಸಲಾಗುತ್ತಿದೆ. ಕಾರ್ಮಿಕ ಘಟಕದಲ್ಲಿ ಒಟ್ಟು 300ಕ್ಕೂ ಹೆಚ್ಚಿನ ಸದಸ್ಯರಿದ್ದಾರೆಂದು ಹೇಳಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಮಾತನಾಡಿ, ನಗರ ಸೇರಿದಂತೆ ಜಿಲ್ಲಾದ್ಯಂತದ ಕಾರ್ಮಿಕ ಸಂಘಟನೆಗಳಿಗೆ ಪಕ್ಷದಿಂದ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಅಷ್ಟೇ ಅಲ್ಲ ನಗರದ ಒಪೆಕ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಹಾಗೂ ಸುರಾನಾ ಸಂಸ್ಥೆಯಿಂದ ವಜಾಗೊಂಡಿರುವವರು ಸೇರಿ ಹಾಲಿ ಕಾರ್ಮಿಕರನ್ನು ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಫರೀದುಲ್ಲಾ, ಪಂಪಾಪತಿ, ನರಸಿಂಹಲು, ಅಮ್ಜದ್ ಹುಸೇನ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement