ಕಾಲೇಜಿಗೆ ಅನುಮತಿ ಇಲ್ಲ: ಡಿಡಿಪಿಐ ಎಚ್ಚರಿಕೆ
ರಾಯಚೂರು: ಗುಲ್ಬರ್ಗದ ಕಾಯಕ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಜಸ್ಟೀಸ್ ಶಿವರಾಜ್ ಪಾಟೀಲ್ ಪದವಿ ಪೂರ್ವ ಕಾಲೇಜಿಗೆ ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ನೀಡಿಲ್ಲ ಎಂದು ಡಿಡಿಪಿಐ ಕಚೇರಿ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿ, ಸರ್ಕಾರದಿಂದ ಅಥವಾ ಶಿಕ್ಷಣ ಇಲಾಖೆಯಿಂದ 2013-14ನೇ ಸಾಲಿಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಸೇರಿ ಯಾವುದೇ ವಿಭಾಗಕ್ಕೆ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಈ ಕಾಲೇಜಿಗೆ ಅನುಮತಿ ನೀಡಿಲ್ಲ. ಸಾರ್ವಜನಿಕರು ತಮ್ಮ ಮಕ್ಕಳನ್ನು ಈ ಕಾಲೇಜಿಗೆ ದಾಖಲಿಸದಂತೆ ಅವರು ಸಲಹೆ ನೀಡಿದ್ದಾರೆ.