ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

Lingaraj Badiger
Updated On : 25 May 2013, 11:19 am

ರಾಯಚೂರು: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದ ಮತ್ತು ವಸತಿ ನಿಲಯಗಳ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಲು ವಿಫಲರಾಗಿರುವ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಕುರಿತು  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಈಚೆಗೆ ದೂರು ಸಲ್ಲಿಸಿರುವ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಅನುಕೂಲಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಳಹಂತದ ಅಧಿಕಾರಿಗಳು ಅಂಥ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ಕಾರ್ಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಮಸ್ಯೆಗಳ ಬಗ್ಗೆ ದೂರು ಹೇಳಲು ತೆರಳುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಮೇಲ್ವಿಚಾರಕರು ಬೆದರಿಕೆಯೊಡ್ಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement