ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಂಕಿತ ಡೆಂಘೀ; ಚಿಕಿತ್ಸೆಗೆ ಆಗ್ರಹ

Lingaraj Badiger
Updated On : 27 May 2013, 11:16 am

ರಾಯಚೂರು: ತಾಲೂಕಿನ ತುಂಗಭದ್ರಾ ಗ್ರಾಮದಲ್ಲಿ ಶಂಕಿತ ಡೆಂಘೀ ಜ್ವರದಿಂದ ಅನೇಕರು ಬಳಲುತ್ತಿದ್ದು ಕೂಡಲೇ ಆರೋಗ್ಯ ಇಲಾಖೆಯಿಂದ ಸೂಕ್ತ ಚಿಕಿತ್ಸೆ ದೊರಕಿಸುವಂತೆ ಗ್ರಾಮದ ಗ್ರಾಪಂ ಸದಸ್ಯರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಗ್ರಾಪಂ ಸದಸ್ಯರಾದ ಹನುಮಂತೆಮ್ಮ, ಮೌಲಾಬೀ ಬಾಷಾ, ರಮೇಶಗೌಡ, ವಾಲಿ, ಭೀಮಾದೇವಿ ಮತ್ತಿತರರು, ಗ್ರಾಮದಲ್ಲಿ ಕಳೆದ ಅನೇಕ ದಿನಗಳಿಂದ 25 ಕ್ಕೂ ಹೆಚ್ಚಿನ ಜನತೆ ಶಂಕಿತ ಡೆಂಘೀ ಜ್ವರದಿಂದ ಬಳಲಿ ಬಳ್ಳಾರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮದಲ್ಲಿ ಈಗಲೂ ಅನೇಕರು ಶಂಕಿತ ಜ್ವರದಿಂದ ಬಳಲುತ್ತಿದ್ದು ಈ ಬಗ್ಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ತಹಸೀಲ್ದಾರ್ ಅವರಿಗೆ ದೂರಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಲೇ ಈ ನಿಟ್ಟಿನಲ್ಲಿ ಮಧ್ಯಪ್ರವೇಶಿಸಿ ಗ್ರಾಮದಲ್ಲಿ ಅನಾರೋಗ್ಯ ಪೀಡಿತರಿಗೆ ಸೂಕ್ತ ಚಿಕಿತ್ಸೆ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement