30ರಂದು ಹುಲಿಗೆಮ್ಮ ದೇವಿ ಜಾತ್ರೆ
ರಾಯಚೂರು: ಮಾನವಿ ತಾಲೂಕಿನ ಅರೋಲಿ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವವು ಮೇ 30ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಗ್ರಾಮದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಜರುಗಲಿದ್ದು, ಮೇ 30ರಂದು ಸಂಜೆ 6 ಗಂಟೆಗೆ ಪಾಯಸ ಹರವಿ ಮತ್ತು ಮೇ 31ರಂದು ಸಂಜೆ 5.30ಕ್ಕೆ ದೇವಿಯ ರಥೋತ್ಸವ ಜರುಗಲಿದೆ. ಸಕಲ ಸದ್ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.