ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಯಚೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ 2013-14ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಕರೆಯಲಾಗಿದೆ. ರಾಜ್ಯ ಪ್ರಶಸ್ತಿಯು ಇಬ್ಬರಿಗೆ ತಲಾ 25 ಸಾವಿರ ಹಾಗೂ 2 ಸಂಸ್ಥೆಗಳಿಗೆ ತಲಾ 1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿದೆ. ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಐ.ಬಿ. ರಸ್ತೆ ರಾಯಚೂರು ಇಲ್ಲಿ ಪಡೆದು ಭರ್ತಿ ಮಾಡಿ ಜೂ. 20ರೊಳಗೆ ಸಲ್ಲಿಸಲು ಕೋರಲಾಗಿದೆ.