ಆರ್ಟಿಪಿಎಸ್ 7ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 7ನೇ ಘಟಕವು ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಉತ್ಪಾದನೆಯನ್ನು ಮಂಗಳವಾರ ಬೆಳಗ್ಗೆ ಸ್ಥಗಿತಗೊಳಿಸಿದೆ. ಘಟಕದ ಬಾಯ್ಲರ್ ಟ್ಯೂಬ್ನಲ್ಲಿ ಕಂಡುಬಂದ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕೆಪಿಸಿ ಅಧಿಕಾರಿಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲು ನಿರ್ಧರಿಸಿದರು. ಈಗಾಗಲೇ ವಿದ್ಯುತ್ ಘಟಕದ 3ನೇ ಘಟಕವು ಕಳೆದ ಕೆಲ ದಿನಗಳಿಂದ ದೋಷದಿಂದಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ಮಂಗಳವಾರ ಬೆಳಗ್ಗೆವರೆಗೆ ಆರ್ಟಿಪಿಎಸ್ ನಲ್ಲಿ ಒಟ್ಟು 1,230 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.