ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸರ್ವ ಸಮುದಾಯ ಅಭಿವೃದ್ಧಿಗೆ ಯತ್ನ: ಪಾಟೀಲ್

Lingaraj Badiger
Updated On : 29 May 2013, 11:12 am

ಸಿಂಧನೂರು: ಸರ್ವ ಸಮುದಾಯಗಳ ಶ್ರೇಯೋಭಿವೃದ್ಧಿಯೊಂದಿಗೆ ಗ್ರಾಮದ ಸವಾಂರ್ಗೀಣ ಅಭಿವೃದ್ಧಿಗಾಗಿ ಸತತ ಶ್ರಮವಹಿಸಿ ದುಡಿಯುತ್ತೇನೆ ಎಂದು ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ನುಡಿದರು.
ಅವರು ತಾಲೂಕಿನ ಬಳಗಾನೂರು ಗ್ರಾಮದಲ್ಲಿ ದೇವಾಂಗ ಸಮಾಜದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದುಳಿದ ವರ್ಗಗಳ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು  ಅಲ್ಪಸಂಖ್ಯಾತರಿಗೆ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆದಿದೆ. ಈಗಾಗಲೇ ದೇವಾಂಗ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಮಂಜೂರು ಮಾಡಿಸಿದ್ದು, ಗುಡಿ ಕೈಗಾರಿಕೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ನೇಕಾರ ಕುಟುಂಬಗಳಿಗೆ ಆಸರೆಯಾಗಲು ಸರ್ಕಾರದಿಂದ ಬರುವ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಗಿರಿಜಮ್ಮ ಗುತ್ತೇದಾರ, ಉಪಾಧ್ಯಕ್ಷ ಎಚ್.ಮಹಾಬಳೇಶ್ವರ, ಬಸವಂತರಾಯ ಕುರಿ ಉಪಸ್ಥಿತರಿದ್ದರು. ಸಮಾಜದ ಅಧ್ಯಕ್ಷ ಬಸವರಾಜ ಪುಟ್ಟಿ, ಅಮರಪ್ಪ ಜೀರಾಳ, ಮುಖಂಡರಾದ ಜಂಪಣ್ಣ, ಚಂದ್ರಣ್ಣ, ನಿಂಗಪ್ಪ, ನಿವೃತ್ತ ಮುಖ್ಯೋಪಾಧ್ಯಾಯ ವೀರಣ್ಣ ಹಂಪರಗುಂದಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ರಾಮಣ್ಣ ಗಂಗಾವತಿ ಹಾಗೂ ಗ್ರಾ.ಪಂ. ಅಧ್ಯಕ್ಷೆ, ಉಪಾಧ್ಯಕ್ಷರಿಗೆ ಮತ್ತು ಬಸವಂತರಾಯ ಕುರಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement