ಆರ್ಟಿಪಿಎಸ್ 8ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 8ನೇ ಘಟಕ ತಾಂತ್ರಿಕ ದೋಷದಿಂದಾಗಿ ಮಂಗಳವಾರ ರಾತ್ರಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ವಿದ್ಯುತ್ ಘಟಕದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಅಧಿಕಾರಿಗಳು ಉತ್ಪಾದನೆ ಸ್ಥಗಿತಗೊಳಿಸಿದ್ದು, ಇತ್ತೀಚೆಗೆ ವಿದ್ಯುತ್ ಕೇಂದ್ರದ 7ನೇ ಘಟಕವು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿತ್ತು. ಆದರೆ ಇದೇ ವೇಳೆ ಕಳೆದ ಕೆಲ ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಮೂರನೇ ಘಟಕ ಕಾರ್ಯಾರಂಭ ಮಾಡಿದೆ ಎಂದು ಆರ್ಟಿಪಿಎಸ್ ಮೂಲಗಳು ಹೇಳಿವೆ.