ಬಾದರ್ಲಿಗೆ ಸಚಿವ ಸ್ಥಾನ ನೀಡಲು ನಿಯೋಗ ಆಗ್ರಹ
ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಜಿಪಂ, ತಾಪಂ, ನಗರಸಭೆ, ಟಿಎಪಿಎಂಎಸ್, ಎಪಿಎಂಸಿ ಸದಸ್ಯರು ಸೇರಿದಂತೆ ಪಕ್ಷದ ಹಿರಿಯ ಮುಖಂಡರ ನಿಯೋಗ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಹರ್ಷದ್ ರಿಜ್ವಾನ ಮತ್ತಿತರ ಮುಖಂಡರನ್ನು ಭೇಟಿಯಾಗಿ ಒತ್ತಾಯಿಸಿದರು.
ನಿಯೋಗದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಎಪಿಎಂಸಿ ಅಧ್ಯಕ್ಷ ಕರಿಯಪ್ಪ ಹರೆಟನೂರ, ನಗರಸಭಾ ಸದಸ್ಯರಾದ ವೆಂಕಟೇಶ ಬಂಡಿ, ನಬೀಸಾಬ, ಶರಣಯ್ಯಸ್ವಾಮಿ, ಎಪಿಎಂಸಿ ನಿರ್ದೇಶಕ ಫಾರೂಕ್ ಸಾಬ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಜನಪ್ರತಿನಿಧಿಗಳು ಕಾಂಗ್ರೆಸ್ ವಿವಿಧ ಮುಖಂಡರನ್ನು ಭೇಟಿಯಾಗಿ ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.