ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗ್ರಾಮಸ್ಥರಿಂದಲೇ ರಸ್ತೆ ದುರಸ್ತಿ

Lingaraj Badiger
Updated On : 31 May 2013, 11:59 am

ಕನ್ನಡಪ್ರಭ ವಾರ್ತೆ, ಮುದಗಲ್, ಮೇ 30
ರಸ್ತೆಯನ್ನ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರೂ ನಿರ್ಲಕ್ಷ್ಯ ಮಾಡಿದ್ದರಿಂದ ಗ್ರಾಮಸ್ಥರೆ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಮುದಗಲ್ ಪಟ್ಟಣದಿಂದ ರಾಮತ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಹೋಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಪಡುವಂತಾಗಿದೆ.
   ಈ ಬಗ್ಗೆ ಪಿಡಬ್ಲೂಡಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ವರ್ಷಗಳೆ ಕಳೆದರೂ ಇತ್ತಕಡೆ ಅಧಿಕಾರಿಗಳು ಗಮನ ಹರಿಸದಿದ್ದಾಗ ತಾಲೂಕ ಪಂಚಾಯಿತಿ ಸದಸ್ಯ ರುದ್ರಗೌಡ ನೇತೃತ್ವದಲ್ಲಿ ಗ್ರಾಮಸ್ಥರೇ ರಸ್ತೆ ದುರಸ್ತಿಗೆ ಮುಂದಾಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ರಸ್ತೆ ತುಂಬಾ ತೆಗ್ಗು ಗುಂಡಿಗಳು ಬಿದ್ದಿದ್ದು ಜೆಸಿಬಿ ಯಂತ್ರದಿಂದ ರಸ್ತೆ ಪಕ್ಕದ ಮಣ್ಣು ಹಾಕಿ ರಸ್ತೆ ದುರಸ್ತಿ ಕೈಗೊಂಡಿದ್ದಾರೆ. ಅಲ್ಲದೆ ಸಮೀಪದ ಅಂಕಲಿ ಮಠದ ಜಾತ್ರೆ ಇನ್ನೆರಡುದಿನಗಳಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಈ ಸಂದರ್ಭದಲ್ಲಿ ತೊಂದರೆಯಾಗಬಾರದು ಎಂದು ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದಾಗಿ ತಾಲೂಕ ಪಂಚಾಯಿತಿ ಸದಸ್ಯ ರುದ್ರಗೌಡ ತಿಳಿಸಿದರು. ಅಲ್ಲದೆ ಇಲಾಖೆಯ ಅಧಿಕಾರಿಗಳು ರಸ್ತೆ ದುರಸ್ತಿ ಬಗ್ಗೆ ಗಮನ ಹರಿಸದೆ ದುರಸ್ತಿ ಹೆಸರಲ್ಲಿ ಸಾಕಷ್ಟು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ರುದ್ರಗೌಡ ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement