ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿದ್ಯುತ್ ಸ್ಪರ್ಶ; ವ್ಯಕ್ತಿ ಸಾವು

Lingaraj Badiger
Updated On : 1 Jun 2013, 11:14 am

ರಾಯಚೂರು: ಸಿಂಧನೂರು ತಾಲೂಕಿನ ಕುನ್ನಟಗಿ ಕ್ಯಾಂಪಿನಲ್ಲಿ ಕೊಳವೆಬಾವಿ ಕೊರೆಯುವ ಯಂತ್ರದ ಮೇಲೆ ಕಬ್ಬಿಣದ ಸಾಮಾನು ಇರಿಸುತ್ತಿದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಮೃತನನ್ನು ಕರ್ತಂ ಮೊಲಾವ ಎಂದು ಗುರುತಿಸಲಾಗಿದೆ. ಈತ ಬೋರ್ವೆಲ್ ಮೆಷಿನ್ ಮೇಲೆ ಸಾಮಾನುಗಳನ್ನು ಇರಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದು ಮಹಿಳೆ ಸಾವು
ರಾಯಚೂರು: ಮಾನವಿ ತಾಲೂಕಿನ ಚಾಗಬಾವಿ ಗ್ರಾಮದಲ್ಲಿ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮಹಿಳೆ ಮೃತಪಟ್ಟಿದ್ದಾಳೆ. ಮೃತಳನ್ನು ತಾರಮ್ಮ ಎಂದು ಗುರುತಿಸಲಾಗಿದೆ. ಈಕೆ ಬಾವಿಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಆತ್ಮಹತ್ಯೆ
ರಾಯಚೂರು: ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್- 3ರಲ್ಲಿ ಮಾನಸಿಕ ಅಸ್ವಸ್ಥೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ನಮೀರಾ ಬೈರಾಗಿ ಎಂದು ಗುರುತಿಸಲಾಗಿದೆ. ಈಕೆ ಎರಡು ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದು, ಅಲ್ಲಲ್ಲಿ ಖಾಸಗಿ ವೈದ್ಯರ ಕಡೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಗುಣವಾಗಿರಲಿಲ್ಲ. ಇದರಿಂದ ಜೀವನದಲ್ಲಿ ಬೇಸರಗೊಂಡ ಆಕೆ ತನ್ನ ವಾಸದ ಜೋಪಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement