ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಕನ್ನಡ ಉಳಿವಿಗೆ ಸಾಹಿತಿಗಳ ಕೊಡುಗೆ ಅಪಾರ'

Mainashree
Updated On : 2 Nov 2013, 1:02 am

ಕ.ಪ್ರ. ವಾರ್ತೆ  ದೇವದುರ್ಗ  ನ.1
ಕನ್ನಡ ಭಾಷೆ, ಸಾಹಿತ್ಯಕ್ಕೆ ಭವ್ಯ ಇತಿಹಾಸವಿದೆ. ಸಾಹಿತ್ಯವು ಅನೇಕ ಸಾಹಿತಿಗಳ ಕೊಡುಗೆಯಿಂದಾಗಿ ಇಂದು ಸಮೃದ್ಧಗೊಂಡಿದೆ ಎಂದು ಶಾಸಕ ವೆಂಕಟೇಶ ನಾಯಕ ಹೇಳಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ತಾಲೂಕು ಆಡಳಿತದಿಂದ ಸಾರ್ವಜನಿಕ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ನಾಡು- ನುಡಿ ರಕ್ಷಣೆಗಾಗಿ ಎಲ್ಲರೂ ಶ್ರಮಿಸುವಂತಹ ಕಾಲ ಬಂದಿದ್ದು ಇದಕ್ಕೆ ಎಲ್ಲರೂ ಮುಂದಾಗುವಂತೆ ಸಲಹೆ ನೀಡಿದರು.
ಕಠಿಣ ಕ್ರಮ: ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಗೈರು ಹಾಜರಾಗುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಶಾಸಕರು, ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿಗೆ ಸೂಚಿಸಿದರು.
ಪ್ರತಿಭಟನೆ: ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಅನೇಕ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅನೇಕ ಬಾರಿ ಹೀಗೆ ಅಧಿಕಾರಿಗಳು ಕನ್ನಡದ ಸಮಾರಂಭ ಸೇರಿ ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಕಡೆಗಣಿಸುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ವೇದಿಕೆಗೆ ನುಗ್ಗಿದ ಕನ್ನಡಪರ ಸಂಘನೆಗಳ ಮುಖಂಡರು ಒತ್ತಾಯಿಸಿದರು.
ರಾಜ್ಯೋತ್ಸವಕ್ಕೆ ಗೈರುಹಾಜರಾದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಸ್ಥಳೀಯ ಕನ್ನಡಪರ ಸಂಘಟನೆಗಳ ಜಿ.ಪಂಪಣ್ಣ, ಡಿ.ಶ್ರೀನಿವಾಸ, ಎಚ್.ಶಿವರಾಜ ಸೇರಿ ಅನೇಕರು ವೇದಿಕೆ ಮೇಲೇರಿ ತಹಸೀಲ್ದಾರ್ಬ್‌ಸಲಿಂಗಪ್ಪ ನೈಕೋಡಿ ಅವರನ್ನು ಒತ್ತಾಯಿಸಿದರು.
ಕ್ರಮದ ಭರವಸೆ: ತಹಸೀಲ್ದಾರರು ಸ್ಪಂದಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪತ್ರ ಬರೆದು ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ  ಹಾಗೂ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಅಯ್ಯಪ್ಪ ತುಕ್ಕಾಯಿ ವಿಶೇಷ ಉಪನ್ಯಾಸ ನೀಡಿದರು.
ಪುರಸಭೆ ಅಧ್ಯಕ್ಷ ಫಕೀರಸಾಬ, ಉಪಾಧ್ಯಕ್ಷ ನಾಗಪ್ಪ ಉಪ್ಪಾರ, ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಶಿವಶಂಕರ ಪಾಟೀಲ್ ಅಲ್ಕೋಡ, ಟಿಎಪಿಸಿಎಂಎಸ್ ಬ್ಯಾಂಕಿನ ಅಧ್ಯಕ್ಷ ಶರಣಗೌಡ ಮಾಲಿಪಾಟೀಲ್, ತಾಲೂಕು ಕಸಾಪ ಅಧ್ಯಕ್ಷ ನರಸಿಂಗರಾವ್ ಸರ್ಕೀಲ್, ರಂಗಣ್ಣ ಪಾಟೀಲ್, ಬಿಇಒ ಎಚ್.ಡಿ. ಹುನಗುಂದ್,  ಭೀಮಣ್ಣ ದೊಡ್ಡಮನಿ, ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement