11ರಂದು ಅರಿವು ಕಾರ್ಯಕ್ರಮ
ರಾಯಚೂರು: ಲಿಂಗಸ್ಗೂರು ತಾಪಂ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಧಾರವಾಡಸಂಯುಕ್ತಾಶ್ರಯದಲ್ಲಿ ನ.11 ಮತ್ತು 12ರಂದು ಲಿಂಗಸ್ಗೂರು ತಾಲೂಕಿನ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಿಆರ್ಜಿಎಫ್ ಯೋಜನೆ ಅಡಿ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿಯ ಜನಪ್ರತಿನಿಧಿಗಳಗೆ ಮತ್ತು ಜನಸಾಮಾನ್ಯರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಗುರುಗುಂಟಾ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು ವಿವಿಧ ಇಲಾಖೆಯಲ್ಲಿ ಲಭ್ಯವಿರುವ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದ್ದಾಗಿದ್ದು, ಕಾರ್ಯಕ್ರಮದಲ್ಲಿ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿಯ ಆಸಕ್ತರು ಆಯಾ ಗ್ರಾಪಂ ಪಿಡಿಒಗಳಲ್ಲಿ ನ.8 ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಸಿಡಾಕ್ನ ಪ್ರಕಟಣೆ ತಿಳಿಸಿದೆ.