12ರಿಂದ 'ಯುವಕ್ರೀಡಾ ಔರ್ ಖೇಲ್'
ರಾಯಚೂರು: ಕೇಂದ್ರ ಸರ್ಕಾರದ ಪಂಚಾಯಿತಿ ಯುವ ಕ್ರೀಡಾ ಔರ್ ಖೇಲ್ ಅಭಿಯಾನ ಕ್ರೀಡಾಕೂಟವು ನ.12ರಿಂದ 18ರವರೆಗೆ ಜಿಲ್ಲಾದ್ಯಂತ ನಡೆಯಲಿವೆ ಎಂದು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.
ಜಿಲ್ಲೆಯ ಎಲ್ಲ ತಾಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ಪ್ರಸಕ್ತ ಸಾಲಿನ ಕ್ರೀಡಾಕೂಟ ನಡೆಯಲಿದ್ದು, ನ.12ರಂದು ರಾಯಚೂರು ತಾಲೂಕಿನ ಬಾಯಿದೊಡ್ಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ, ನ.13ರಂದು ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಲಿಂಗಸ್ಗೂರು ತಾಲೂಕಿನ ಅಮದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ, ನ.15ರಂದು ಸಿಂಧನೂರು ತಾಲೂಕಿನ ಜಾಲಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ, ನ.18ರಂದು ಜಿಲ್ಲಾಮಟ್ಟದ ಕ್ರೀಡಾಕೂಟ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ರಾಯಚೂರು ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು ಹಾಗೂ ಜಿಲ್ಲಾ ಹಾಗೂ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.