ಹಳ್ಳದಲ್ಲಿ ಬಿದ್ದು ಬಾಲಕ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮದ ಬಳಿಯ ಹಳ್ಳಕ್ಕೆ ಸ್ನಾನ ಮಾಡಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.
ಮೃತನನ್ನು ನೂರಬಾಷಾ(11) ಎಂದು ಗುರುತಿಸಲಾಗಿದೆ. ಈತ ಹಳ್ಳಕ್ಕೆ ಸ್ನಾನ ಮಾಡಲು ತೆರಳಿದ್ದು, ಆಕಸ್ಮಿಕವಾಗಿ ಹಳ್ಳ ದಲ್ಲಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮುಳುಗಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಾನಸಿಕ ಅಸ್ವಸ್ಥೆ ಆತ್ಮಹತ್ಯೆ
ರಾಯಚೂರು: ಮಾನವಿ ತಾಲೂಕು ಚಾಗಬಾವಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಲಕ್ಷ್ಮಿ(35) ಎಂದು ಗುರುತಿಸಲಾಗಿದೆ. ಈಕೆಯು ಮಾನಸಿಕ ರೋಗದಿಂದ ಬಳಲುತ್ತಿದ್ದು, ಅದರಿಂದ ಬೇಸತ್ತು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.