16ರಂದು ಬೀಜ ಸಂಸ್ಕರಣ ಘಟಕದ ಉದ್ಘಾಟನೆ
ಗುಲ್ಬರ್ಗ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಗುಲ್ಬರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಕೋಟನೂರ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬೀಜ ಸಂಸ್ಕರಣ ಘಟಕವನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ನ.16ರಂದು ಬೆ.11 ಗಂಟೆಗೆ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ಸಂಸ್ಕರಣ ಯಂತ್ರಗಳಿಗೆ ಚಾಲನೆ ನೀಡುವರು. ಗುಲ್ಬರ್ಗ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೇಲ್ವೆ ಖಾತೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಮಾಜಿ ಮುಖ್ಯಮಂತ್ರಿ ಡಾ. ಧರ್ಮಸಿಂಗ್, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ, ಜಿಪಂ ಅಧ್ಯಕ್ಷ ರಮೇಶ ಮರಗೋಳ, ಶಾಸಕರಾದ ಜಿ.ರಾಮಕೃಷ್ಣ, ಮಾಲಿಕಯ್ಯ ಗುತ್ತೇದಾರ, ಬಿ.ಆರ್.ಪಾಟೀಲ್, ಡಾ. ಉಮೇಶ ಜಾಧವ, ಡಾ. ಅಜಯಸಿಂಗ್, ಪ್ರಿಯಾಂಕ್ ಖರ್ಗೆ, ಎಂಎಲ್ಸಿಗಳಾದ ಕೆ.ಬಿ. ಶಾಣಪ್ಪ, ಅಲ್ಲಂಪ್ರಭು ಪಾಟೀಲ್, ಅಮರನಾಥ ಪಾಟೀಲ್, ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ, ನಂದಿಕೂರ ಗ್ರಾಪಂ ಅಧ್ಯಕ್ಷ ಅಶೋಕ ಬಿ.ನಾಗನಳ್ಳಿ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಭರತಲಾಲ್ ಮೀನಾ, ಕೃಷಿ ಇಲಾಖೆಯ ನಿರ್ದೇಶಕ ಡಾ. ಧರ್ಮರಾಜನ್, ಜಿಲ್ಲಾಧಿಕಾರಿ ಎನ್.ವಿ. ಪ್ರಸಾದ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಮಿತಸಿಂಗ್, ಜಿಪಂ ಸಿಇಒ ಟಿಎಚ್ಎಂ ಕುಮಾರ್, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಆನಂದ ಕೃಷ್ಣ, ಜಂಟಿ ಕೃಷಿ ನಿರ್ದೇಶಕ ಜಿಲಾನಿ ಎಚ್.ಮೊಕಾಶಿ, ನಿಗಮದ ನಿರ್ದೇಶಕರಾದ ಐ.ಎಸ್. ಪಾಟೀಲ್, ಡಿ.ಎಲ್. ನಾಗರಾಜ, ಎಸ್.ರಾಜೇಂದ್ರ ಪ್ರಸಾದ, ಸಿದ್ದಲಿಂಗಪ್ಪ ಟಿ.ಹೊಸಮನಿ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಬಸವರಾಜ ಶಂಕರಶೆಟ್ಟಿ ಮಾಲಿಪಾಟೀಲ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಧಂಗಾಪುರ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ನಿರ್ದೇಶಕ ಡಾ. ಬಾಲರಾಜ ರಂಗರಾವ ಆಗಮಿಸುವರು.