ಕೆಜೆಪಿಗೆ ಭಾರತಿ ರಾಜಿನಾಮೆ
ಗುಲ್ಬರ್ಗ: ಎಸ್.ಜಿ. ಭಾರತಿ ಕೆಜೆಪಿ ಎಸ್ಸಿ ಘಟಕದ ರಾಜ್ಯ ಉಪಾಧ್ಯಕ್ಷ ಹಾಗೂ ಸಕ್ರಿಯ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಪಕ್ಷದಲ್ಲಿ ಪರಿಶಿಷ್ಟ ಜನಾಂಗವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ಮನನೊಂದು ರಾಜಿನಾಮೆ ನೀಡಿದ್ದೇನೆ. ಬಿಜೆಪಿ ಪಕ್ಷದಲ್ಲಿ ಸುಮಾರು 20 ವರ್ಷಗಳಿಂದ ಪಕ್ಷದ ವಿವಿಧ ಜವಾಬ್ದಾರಿ ಹೊತ್ತು ಪಕ್ಷಕ್ಕಾಗಿ ದುಡಿದಿದ್ದೇನೆ. ಶೀಘ್ರ ಬಿಜೆಪಿ ಮುಖಂಡರ ಜತೆ ಚರ್ಚಿಸಿ ಮತ್ತೆ ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.