ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಕೆ

Rashmi Kasaragodu
Updated On : 13 Nov 2013, 12:09 pm

ಸಿಂಧನೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆಯನ್ನು ಅಲ್ಪಸಂಖ್ಯಾತರಿಗೆ ಮಾತ್ರವಲ್ಲದೆ ಎಲ್ಲ ವರ್ಗದ ಬಡಕುಟುಂಬಗಳಿಗೂ ವಿಸ್ತರಿಸುವಂತೆ ಆಗ್ರಹಿಸಿ ಕೆಜೆಪಿ ಕಾರ್ಯಕರ್ತರು ತಹಸೀಲ್ದಾರ್ ವೆಂಕನಗೌಡ ಪಾಟೀಲ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಹಾಗೂ ಶಾದಿಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ. ಆದರೆ ಮದುವೆ ಸಮಯದಲ್ಲಿ 50 ಸಾವಿರ ಆರ್ಥಿಕ ನೆರವು ನೀಡುವ ಯೋಜನೆಯನ್ನು ಒಂದೇ ನಿರ್ದಿಷ್ಟ ವರ್ಗಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ. ಇದರ ಪ್ರಯೋಜನ ಎಲ್ಲ ಜಾತಿ ವರ್ಗದ ಬಡ ಕುಟುಂಬಗಳಿಗೆ ದೊರಕಬೇಕು ಎಂದರು.
ರೈತರು ಬೆಳೆದ ಬತ್ತ ಹಾಗೂ ಹತ್ತಿ ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸಬೇಕು, ಸಿಂಧನೂರು ನಗರ, ಗ್ರಾಮೀಣ ಹಾಗೂ ರಾಜ್ಯ ಹೆದ್ದಾರಿಗಳ ಹದಗೆಟ್ಟ ರಸ್ತೆಗಳ ನಿರ್ಮಾಣಕ್ಕೆ ಹಾಗೂ ಧೂಳು ಮುಕ್ತ ನಗರವನ್ನಾಗಿಸಲು ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ಮಾಡಿದ ತಪ್ಪಿತಸ್ಥರಿಗೆ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement