ಮಹಿಳೆ ಆತ್ಮಹತ್ಯೆ
ರಾಯಚೂರು: ಸಿಂಧನೂರು ನಗರದ ಮಹೆಬೂಬ್ ಕಾಲನಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತಳನ್ನು ಪಾರ್ವತಿ(46) ಎಂದು ಗುರುತಿಸಲಾಗಿದೆ. ಈಕೆ ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಅದರಿಂದ ಬೇಸತ್ತ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಸದ ಮನೆಯಲ್ಲಿ ಬೆಂಕಿ ಹಚ್ಚಿಕೊಂಡಿದ್ದು, ಸುಟ್ಟ ಗಾಯಗಳಿಂದ ಬಳಲಿದ ಆಕೆಯನ್ನು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾಳೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.