ಯೋಜನೆಗಳ ಸದುಪಯೋಗಕ್ಕೆ ಅವಶ್ಯ: ಪುಷ್ಪಾ
ಲಿಂಗಸ್ಗೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಹೊಂದುವ ಮೂಲಕ ಇವುಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಪಂ ಸದಸ್ಯೆ ಪುಷ್ಪಾ ಪಾಮಯ್ಯ ಮುರಾರಿ ಕರೆ ನೀಡಿದರು.
ಪಟ್ಟಣದ ಶಾದಿ ಮಹಲ್ನಲ್ಲಿ ತಾಪಂ, ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಬಿಆರ್ಜಿಎಫ್ ಯೋಜನೆಯಡಿ ಶನಿವಾರ ಹಮ್ಮಿಕೊಂಡಿದ್ದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಸರಕಾರಿ ಯೋಜನೆಗಳ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಬಲತೆಗೆ ಕೃಷಿ, ರೇಷ್ಮೆ, ಶಿಕ್ಷಣ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಯೋಜನೆಗಳ ಕುರಿತು ಸಮಗ್ರವಾಗಿ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಅಧಿಕಾರಿ ಸಿದ್ಧಲಿಂಗಪ್ಪ, ಚಿದಾನಂದ, ರೇಷ್ಮೆ ಇಲಾಖೆ ಅಧಿಕಾರಿ ಶಿವಸಂಗನಗೌಡ, ತೋಟಗಾರಿಕೆ ಅಧಿಕಾರಿ ಮಡಿವಾಳಪ್ಪ ಕಡಕೋಳ, ಶಿಕ್ಷಣ ಇಲಾಖೆ ಸಿಆರ್ಪಿ ಸೈಫುಲ್ಲಾಸಾಬ, ಸಿಡಾಕ್ ಸಂಸ್ಥೆ ಸಂಚಾಲಕ ಜಗದೀಶ ಇದ್ದರು.