ಏ.10ರವರೆಗೆ ನೀರು ಹರಿಸಿ
ಸುರಪುರ: ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಯಶದಿಂದ ನಾರಾಯಣಪುರ ಎಡದಂಡೆ ಕಾಲುವೆ ಏ. 10ರವರೆಗೆ ನೀರು ಹರಿಸಿ ರೈತರ ಬೆಳೆಗಳನ್ನು ಸರ್ಕಾರ ರಕ್ಷಿಸಬೇಕು ಎಂದು ಮಾಜಿ ಸಚಿವ ರಾಜೂಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.
2 ಬಾರಿ ಶಾಸಕ ಮತ್ತು ಸಚಿವನಾಗಿದ್ದಾಗ ನೀರಿನ ಕೊರತೆಯಿದ್ದಾಗಲೂ ಮಾರ್ಚ್ ತಿಂಗಳ ಕೊನೆಯವರೆಗೂ ನೀರು ಹರಿಸಲಾಗಿತ್ತು. ಆದರೆ ಈ ಬಾರಿ ಸಾಕಷ್ಟು ಮಳೆಯಾಗಿದೆ ಮತ್ತು ಜಲಾಶಯಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ. ಏ.10ರವರೆಗೂ ನೀರು ಹರಿಸಲು ಯಾವುದೇ ತೊಂದರೆಯಿಲ್ಲ. ಮಾ. 10ರವರೆಗೆ ನೀರು ಹರಿಸುತ್ತೇವೆ ಎಂದು ಹೇಳಿರುವುದು ರೈತರ ಜಂಘಾಬಲವನ್ನೇ ಉಡುಗಿಸಿದೆ. ಏ.10ರವರೆಗೆ ನೀರು ಹರಿಸಬೇಕು. ಇಲ್ಲವಾದರೆ ರೈತರಿಂದ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಕಡ್ಡಾಯ ನೀರು ಹರಿಸಿ: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಆಣೆಕಟ್ಟುಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸಲು ಆಗ್ರಹಿಸಿದರು. ಮಾ. 31ರವರೆಗೆ ಕಡ್ಡಾಯ ಕಾಲುವೆಗೆ ನೀರು ಹರಿಸಲೇಬೇಕೆಂದು ಆಗ್ರಹಿಸಿದರು. ಲಿಂಗಸ್ಗೂರು ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ಎಂಜನೀಯರ್ಗಳು ರಾತ್ರೋರಾತ್ರಿ ಜಲಾಶಯಗಳಿಂದ ನದಿಗೆ ನೀರು ಹರಿಸಿ ಪೋಲು ಮಾಡುತ್ತಾರೆ ಎಂದು ಆರೋಪಿಸಿದರು.