ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಕ್ಕಳ ದಿನಾಚರಣೆಯಂದು ನೆಹರು ನೆನಪು ಅಮರ

Mainashree
Updated On : 20 Nov 2013, 10:48 am

ಮಸ್ಕಿ: ಪಟ್ಟಣದಲ್ಲಿ ಇತ್ತೀಚೆಗೆ ವಿವಿ ಸಂಘದ ಶಾರದಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಲ್ಲಿ ಮಾತನಾಡಿದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಾನಪ್ಪ ಅವರು, ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪಂಚವಾರ್ಷಿಕ ಯೋಜನೆಗಳು, ಪಂಚಶೀಲ ತತ್ವಗಳು ಆದರಣೀಯವಾಗಿದ್ದು ಅವುಗಳಿಂದಾಗಿಯೇ ದೇಶ ಪ್ರಗತಿ ಕಂಡಿದೆ ಎಂದರು.
ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿಯಿತ್ತು. ಅದೇ ಕಾರಣಕ್ಕೆ ನೆಹರು ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಶಾಲೆಯ ಮುಖ್ಯಗುರು ಗಿರಿಜಾ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಶಿವರಾಜ ಯಂಬ್ಲದ್ ಅಧ್ಯಕ್ಷತೆ ವಹಿಸಿದ್ದರು. ಸಂಗಮ್ಮ ಕರಡಕಲ್, ಪ್ರಭಾಕರ ಕುಲ್ಕರ್ಣಿ, ಕೃಷ್ಣ ಕುಲಕರ್ಣಿ ಉಪಸ್ಥಿತರಿದ್ದರು. ಶಿಕ್ಷಕರಾದ ಸಿದ್ದಯ್ಯಸ್ವಾಮಿ, ಮೌನೇಶ್ ಸೇರಿ ಬೋಧಕ ವರ್ಗ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಯ ವಿಜೇತರಿಗೆ ಈ ವೇಳೆ ಬಹುಮಾನ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement