ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಉಸ್ತುವಾರಿ ಮಂತ್ರಿ ರಾಜಿನಾಮೆಗೆ ಆಗ್ರಹ

Lingaraj Badiger
Updated On : 21 Nov 2013, 11:04 am

ಸಿಂಧನೂರು: ರಾಯಚೂರು ಜಿಲ್ಲಾದ್ಯಂತ ದಲಿತರ ಮೇಲೆ ನಿರಂತರ ದೌರ್ಜನ್ಯ, ಮಾರಣಾಂತಿಕ ಹಲ್ಲೆ, ಸಾಮಾಜಿಕ ಬಹಿಷ್ಕಾರ, ಲೈಂಗಿಕ ಕಿರುಕುಳ ನಡೆಯುತ್ತಿವೆ. ಜಿಲ್ಲಾಡಳಿತ ಪ್ರಕರಣಗಳನ್ನು ತಛಡೆಗಟ್ಟದೇ ಸವರ್ಣೀಯರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ರಾಜಿನಾಮೆ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಮಹಾದೇವ ಧುಮತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
 ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾನವಿ ತಾಲೂಕಿನ ಬಾದರದಿನ್ನಿ ಗ್ರಾಮದಲ್ಲಿ ಕ್ಷೌರದ ಪ್ರಕರಣ, ಹಳ್ಳಿಹೊಸೂರು ಗ್ರಾಮದ ದಲಿತ ಯುವತಿ ಅತ್ಯಾಚಾರ ಪ್ರಕರಣ, ಜಾನೇಕಲ್ ಗ್ರಾಮದ ದಲಿತ ಕುಟುಂಬದ ಮೇಲಿನ ಹಲ್ಲೆ, ಸಿಂಧನೂರಿನ ಚಿಕ್ಕಕಡಬೂರು ಗ್ರಾಮದ ಪ್ರಕರಣ ಹೀಗೆ ಅನೇಕ ಪ್ರಕರಣಗಳಲ್ಲಿ ದಲಿತರನ್ನು ಅಮಾನವೀಯವಾಗಿ ಪೊಲೀಸ್ ಅಧಿಕಾರಿಗಳು, ಸವಣೀಯರು ನೋಡಿಕೊಂಡಿದ್ದಾರೆ.
ಈ ಬಗ್ಗೆ ಮನವಿ ಪತ್ರಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೇವಲ ಮೊಸಳೆ ಕಣ್ಣೀರು ಸುರಿಸುವ ಯತ್ನವನ್ನು ಜಿಲ್ಲಾಧಿಕಾರಿ ಮತ್ತು ಎಸ್ಪಿ ಮಾಡಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ಭೂಮಿ, ನಿವೇಶನ, ವಸತಿ ಮೂಲ ಸೌಲಭ್ಯ ಒದಗಿಸಬೇಕು. ದಲಿತರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement